ಮಹಿಳೆ ಭಾರತೀಯ ಸಂಸ್ಕೃತಿ ಸಂರಕ್ಷಕಿ: ರಾಧಾ ಉಮೇಶ್
Mar 21 2024, 01:03 AM ISTಭಾರತೀಯ ಸಮಾಜದಲ್ಲಿ ಮಹಿಳೆಯರಿಗೆ ಪವಿತ್ರ ಸ್ಥಾನವಿದೆ. ಸ್ತ್ರೀ ಭಾರತೀಯ ಸಂಸ್ಕೃತಿಯ ಸಂರಕ್ಷಕಿ, ಸ್ತ್ರೀಪ್ರಧಾನ ಮೌಲ್ಯಗಳು ಈ ದೇಶದ ಶ್ರೇಷ್ಠ ಸಂಸ್ಕೃತಿಯ ಬಿಂಬ. ಮಹಿಳೆಯರನ್ನು ಗೌರವಿಸುವ ಸಮಾಜಗಳು ಬಹುಬೇಗ ಪ್ರಗತಿ ಪಥದತ್ತ ಸಾಗುತ್ತವೆ. ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಸೊರಬ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಸೊರಬದಲ್ಲಿ ಹೇಳಿದ್ದಾರೆ.