ಜೀವ ಹೋದ್ರು ಭೂಮಿ ಬಿಟ್ಟು ಕೊಡಲ್ಲ
May 23 2025, 12:24 AM ISTಕನ್ನಡಪ್ರಭ ವಾರ್ತೆ ವಿಜಯಪುರ ತಿಡಗುಂದಿ ಬಳಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಇಂಡಸ್ಟ್ರೀಯಲ್ ಹಬ್ ನಿರ್ಮಾಣಕ್ಕೆ ನಿರ್ಧರಿಸಿದ್ದು, ಅದಕ್ಕಾಗಿ ಭೂಸ್ವಾಧೀನಕ್ಕೆ ಮುಂದಾಗಿದೆ. ಆದರೆ, ಭೂಸ್ವಾಧೀನಕ್ಕೆ ವಿರೋಧಿಸಿದ ನೂರಾರು ರೈತರು ಕಪ್ಪು ಬಟ್ಟೆ ಧರಿಸಿ ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗೆ ಬಿಟ್ಟುಕೊಡುವುದಿಲ್ಲ ಧರಣಿ ನಡೆಸಿದರು.