ಜೆಜೆಎಂ ಯೋಜನೆಯಲ್ಲಿ ಭ್ರಷ್ಟಾಚಾರ: ಸಂಸದ ಕರಡಿ

Dec 02 2023, 12:45 AM IST
ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.ಪಟ್ಟಣದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಇದು ₹೧೨೩ ಕೋಟಿ ಯೋಜನೆ. ಸಂಸದರಿಂದ ಹಿಡಿದು ಎಲ್ಲರೂ ಲೂಟಿ ಮಾಡಿದ್ದಾರೆ. ಇರಲಿ, ನನ್ನನ್ನೂ ಸೇರಿ ಹೇಳುವೆ. ಈ ಯೋಜನೆ ಬಗ್ಗೆ ನಾನು ಬಹಿರಂಗವಾಗಿಯೇ ಹೇಳುವೆ. ನಾವೇನು ಹರಿಶ್ಚಂದ್ರರಲ್ಲ. ನ್ಯಾಯ, ಅನ್ಯಾಯ ನೋಡಬೇಕು. ಅನ್ಯಾಯದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಕೂಡ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡ್ತಾರೆ. ಇದೆಲ್ಲ ಬಿಟ್ಟು ಜನರ ಸೇವೆ ಮಾಡಬೇಕೆಂದರು.