• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಮಲತಾ ಕೈ ತಪ್ಪಿದ ಮಂಡ್ಯ ಕ್ಷೇತ್ರ

Mar 24 2024, 01:37 AM IST
ಇದೀಗ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಂಸದೆ ಸುಮಲತಾ ಬಂಡಾಯವೇಳುವ ಅಥವಾ ಪಕ್ಷೇತರವಾಗಿ ಚುನಾವಣಾ ಅಖಾಡ ಪ್ರವೇಶಿಸುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಅದಕ್ಕೆ ಪೂರಕವಾದ ವಾತಾವರಣವೂ ಮಂಡ್ಯದೊಳಗೆ ಇಲ್ಲದಂತಾಗಿದೆ.

ಕೋಲಾರ, ಮಂಡ್ಯ, ಹಾಸನ ಜೆಡಿಎಸ್‌ಗೆ: ಬಿಜೆಪಿ ಘೋಷಣೆ

Mar 24 2024, 01:35 AM IST
ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್‌, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರ ರಾಜಕೀಯ ಭ‍ವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ‘ಕುಮಾರ’ ಸಂಭವ

Mar 24 2024, 01:33 AM IST
ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿ ದೇಹಾರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದರೊಂದಿಗೆ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯುವುದಕ್ಕೆ ರೆಡಿಯಾಗುತ್ತಿದ್ದಾರೆ.

‘ತೆನೆ ಇಳಿಸಿ ಕೈ ಪಾಳಯ’ ಸೇರಿಕೊಂಡ ಮಂಡ್ಯ ಜಿಲ್ಲೆ ಪ್ರಮುಖ ಮುಖಂಡರು..!

Mar 23 2024, 01:09 AM IST
ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಪಕ್ಷಾಂತರ ಪರ್ವವೂ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಚುನಾವಣಾ ಸಮಯದಲ್ಲಿ ಜೆಡಿಎಸ್‌ನ ಪ್ರಮುಖರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದರೊಂದಿಗೆ ಜಿಲ್ಲೆಯೊಳಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ಚುನಾವಣಾ ಸಂಗ್ರಾಮಕ್ಕೆ ಹೊಸ ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ದಳಪತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

ಎಚ್‌ಡಿಕೆ ಮಂಡ್ಯ ಮೈತ್ರಿ ಅಭ್ಯರ್ಥಿ: ಸಿ.ಎಸ್‌.ಪುಟ್ಟರಾಜು

Mar 22 2024, 01:09 AM IST
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ಮಂಡ್ಯ ನಗರದಲ್ಲಿ ಮನೆ ಖರೀದಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Mar 21 2024, 01:02 AM IST

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನಗರದ ಬಂದೀಗೌಡ ಬಡಾವಣೆಯಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ.

ಮಂಡ್ಯ ತಾಲೂಕು ಈಚಗೆರೆಯಲ್ಲಿ 27 ವರ್ಷಗಳ ಬಳಿಕ ಹಬ್ಬದ ಸಂಭ್ರಮ..!

Mar 21 2024, 01:02 AM IST
ಮಂಡ್ಯ ತಾಲೂಕಿನ ಈಚಗೆರೆ ಗ್ರಾಮದಲ್ಲಿ 27 ವರ್ಷಗಳ ಬಳಿಕ ಮಾ.21ರಿಂದ ಎರಡು ದಿನಗಳ ಕಾಲ ಗ್ರಾಮದಲ್ಲಿ ಶ್ರೀಹಿರಿಯಮ್ಮ, ಶ್ರೀ ಕಾಳಿಕಾಂಬ ದೇವಿಯ ಕೊಂಡ-ಬಂಡಿ ಉತ್ಸವ ಸಂಭ್ರಮದಿಂದ ಜರುಗಲಿದೆ. ಉತ್ಸವದ ಅಂಗವಾಗಿ ಇಡೀ ಗ್ರಾಮ ವಿದ್ಯುದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಮಾ.21ರ ಮುಂಜನೆಯಿಂದಲೇ ಶ್ರೀಹಿರಿಯಮ್ಮ, ಶ್ರೀಕಾಳಿಕಾಂಬ ದೇವರಿಗೆ ಪೂಜಾ ಕೈಂಕರ್ಯಗಳು ನಡೆಯಲಿದೆ.

ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ

Mar 20 2024, 01:16 AM IST
ನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.

ಮಂಡ್ಯ ವ್ಯಾಪ್ತಿಯ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆ

Mar 19 2024, 12:53 AM IST
ಚುನಾವಣಾ ಪ್ರಚಾರ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕಿದ್ದು, ಇದಕ್ಕಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಮಂಡ್ಯ ಜಿಲ್ಲೆಯ ೩೪೮ ಗ್ರಾಮಗಳಿಗೆ ಜಲಕಂಟಕ..!

Mar 19 2024, 12:52 AM IST
ಕಳೆದ ವರ್ಷ ಮಳೆಯಾಗದೆ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಲಿಲ್ಲ. ಅಂತರ್ಜಲದ ಮಟ್ಟವೂ ಕುಸಿಯುತ್ತಲೇ ಇದೆ. ಪ್ರಸ್ತುತ ೧೩ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳು ಹಾಗೂ ಒಂದು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಜಿಲ್ಲೆಯ ೩೪೮ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಬಹುದು ಎಂದು ಅಂದಾಜಿಸಲಾಗಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 44
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved