• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ: ಅನ್ನದಾತಗೆ ಬರೆ..!

Sep 23 2024, 01:25 AM IST
ಕೊನೆಯ ಭಾಗದಲ್ಲಿ ನೀರಿಗಾಗಿ ರೈತರ ನಡುವೆ ಕಾದಾಟ ಶುರುವಾಗಿದೆ. ನೀರು ಸಿಗುವ ನಿರೀಕ್ಷೆಯಲ್ಲಿ ಭತ್ತದ ಸಸಿ ಮಾಡಿಟ್ಟುಕೊಂಡವರಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದಿದ್ದರಿಂದ ನಾಟಿಯಿಂದ ದೂರ ಉಳಿದಿದ್ದಾರೆ. ನೀರು ದೊರೆತು ನಾಟಿ ಮಾಡಿರುವವರಿಗೂ ಕೊನೆಯವರೆಗೆ ಬೆಳೆ ಉಳಿಸಿಕೊಳ್ಳುವ ಸವಾಲು ಎದುರಾಗಿದೆ.

ಮಂಡ್ಯ ವಿಶ್ವ ವಿದ್ಯಾಲಯದಿಂದ 11 ಬೋಧಕರು ವರ್ಗಾವಣೆ

Sep 23 2024, 01:16 AM IST
ವಿಶ್ವ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 23 ಮಂದಿ ಕಾಯಂ ಬೋಧಕರ ಪೈಕಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಯೋಗಾನರಸಿಂಹಚಾರಿ ಸೇರಿದಂತೆ 11 ಮಂದಿ ವರ್ಗಾವಣೆಯಾಗಿರುವುದರಿಂದ ಸದ್ಯ 12 ಮಂದಿ ಬೋಧಕರಷ್ಟೇ ಕಾಲೇಜಿನಲ್ಲಿ ಉಳಿದುಕೊಂಡಿದ್ದಾರೆ. 4 ಸಾವಿರ ವಿದ್ಯಾರ್ಥಿಗಳಿಗೆ 12 ಮಂದಿ ಬೋಧಕರಿದ್ದು ಪಠ್ಯವಿಷಯಗಳ ಬೋಧನೆಗೆ ತೀವ್ರ ಹಿನ್ನೆಡೆಯಾಗಿದೆ.

ಮಂಡ್ಯ ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ

Sep 21 2024, 01:47 AM IST
ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಎಸ್‌ಎಸ್‌ಕೆ ಪ್ರೌಢಶಾಲೆಯ ಸಂಯುಕ್ತಾಶ್ರಮದಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ-8, ಬಾಲಕರ-8, ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಲಕಿಯರ-8, ಬಾಲಕ-8 ತಂಡಗಳಿಂದ 650ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಂಡ್ಯ ನುಡಿಜಾತ್ರೆ ಪ್ರಯುಕ್ತ 22ರಿಂದ ಕನ್ನಡ ರಥ ಸಂಚಾರ

Sep 19 2024, 01:49 AM IST
ಸೆ. 22ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆ ವಹಿಸುವರು.

ಮಂಡ್ಯ ಜಿಲ್ಲೆ ನೀರಾವರಿ ಪ್ರದೇಶ ನಾಲ್ವಡಿ, ಎಸ್ ಎಂವಿ ಕೊಡುಗೆ: ಪುಟ್ಟಸ್ವಾಮಿ

Sep 18 2024, 01:52 AM IST
ನಾಲ್ವಡಿ ಕೃಷ್ಣರಾಜ ಓಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಲ್ಪಿಸಿದ ನೀರಾವರಿ ಸೌಲಭ್ಯದಿಂದ ನಮ್ಮ ಭಾಗದ ರೈತರು ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ. ಕೆಆರ್‌ಎಸ್ ಜಲಾಶಯ ನಿರ್ಮಾಣ ಮಾಡದಿದ್ದರೆ ಮಂಡ್ಯ ಜಿಲ್ಲೆ ನೀರಿಗೆ ಅಭಾವ ಉಂಟಾಗುತ್ತಿತ್ತು. ಸರ್‌ಎಂವಿ ಅವರನ್ನು ಎಂದೆಂದಿಗೂ ಸ್ಮರಿಸಿಕೊಳ್ಳಬೇಕಿದೆ.

ಮಂಡ್ಯ ಗಲಭೆ: ಕಾಂಗ್ರೆಸ್ ಓಲೈಕೆ ರಾಜಕಾರಣವೇ ಕಾರಣ -ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 13 2024, 01:51 AM IST
ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಗೃಹ ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಪೊಲೀಸರು ಸರಿಯಾಗಿ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈಮೀರುತ್ತಿರಲಿಲ್ಲ ಎಂದರು.

ಸೆ.13ರಂದು ಮಂಡ್ಯ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ಘಟಿಕೋತ್ಸವ -ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ

Sep 13 2024, 01:50 AM IST

ಮಂಡ್ಯ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ಘಟಿಕೋತ್ಸವ ಸೆ.13 ರಂದು ಬೆಳಗ್ಗೆ 11.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ.ಪುಟ್ಟರಾಜು ಹೇಳಿದರು.

ಮಂಡ್ಯ ನಾಗಮಂಗಲದ ಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Sep 13 2024, 01:46 AM IST
ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ; ಪರಿಶೀಲನೆ

Sep 13 2024, 01:39 AM IST
ಸಚಿವರು ಭೇಟಿ ಕೊಟ್ಟ ಸಮಯದಲ್ಲಿ ಕೆಲ ಅಂಗಡಿ ಮಾಲೀಕರು ಸಾಲ ಮಾಡಿ ಬಂಡವಾಳ ಹಾಕಿದ್ದೇವೆ. ಕಿಡಿಗೇಡಿಗಳು ನಡೆಸಿರುವ ಈ ಕೃತ್ಯದಿಂದಾಗಿ ಅಪಾರ ನಷ್ಟ ಉಂಟಾಗಿದೆ. ಅಲ್ಲದೆ ನಮ್ಮ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಕಣ್ಣೀರು ಹಾಕಿದರು.

ಮಂಡ್ಯ ನಾಗಮಂಗಲ ಗಲಭೆ: ಬಿಜೆಪಿ ನಾಯಕರಿಂದ ಸ್ಥಳ ಪರಿಶೀಲನೆ, ಸರ್ಕಾರದ ವಿರುದ್ಧ ಕಿಡಿ

Sep 13 2024, 01:34 AM IST
ಗಲಭೆ ಪೀಡಿತ ನಾಗಮಂಗಲಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯನ್ನು ದೇಶದ್ರೋಹಿಗಳ ಪೂರ್ವನಿಯೋಜಿತ ಕೃತ್ಯ ಎಂದು ಬಿ.ವೈ. ವಿಜಯೇಂದ್ರ ಕರೆದರು. ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 43
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved