• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಲೋಕಸಭಾ ಕ್ಷೇತ್ರ: ಅಂತಿಮವಾಗಿ ೧೭,೭೯,೨೩೯ ಮತದಾರರು

Apr 09 2024, 12:48 AM IST
ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಪ್ರತಿ ಮತಗಟ್ಟೆಗೆ ಇಳಿಜಾರು ವ್ಯವಸ್ಥೆ, ವ್ಹೀಲ್‌ಚೇರ್ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷವುಳ್ಳ ವಿಕಲಚೇತನರಿಗೆ ಬ್ರೈಲ್ ಲಿಪಿಯುಳ್ಳ ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆ ಹಾಗೂ ಡಮ್ಮಿ ಬ್ರೈಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಕಲ್ಪಿಸಲಾಗಿದೆ.

ಮಂಡ್ಯ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು..!

Apr 09 2024, 12:46 AM IST
ಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ನಾಮಪತ್ರ ಹಿಂಪಡೆದಿದರು. ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿತ್ತು. ಅಂತಿಮವಾಗಿ 14 ಮಂದಿ ಕಣದಲ್ಲಿ ಉಳಿದಿದ್ದಾರೆ.

ಮಂಡ್ಯ ಜಿಲ್ಲೆಯ ಎಲ್ಲೆಡೆ ನವ ವಸಂತಾಗಮನದ ಹರ್ಷ..!

Apr 09 2024, 12:46 AM IST
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿಗಳು ಜನರಿಂದ ತುಂಬಿಹೋಗಿದ್ದವು. ಮಹಿಳೆಯರು, ಮಕ್ಕಳೊಂದಿಗೆ ಅಂಗಡಿಗಳಿಗೆ ಬಂದು ಹೊಸ ಬಟ್ಟೆ ಖರೀದಿಯಲ್ಲಿ ತೊಡಗಿದ್ದರು. ಇಷ್ಟವಾದ ಬಟ್ಟೆಗಳನ್ನು ಖರೀದಿಸಿದ ಖುಷಿ ಮಕ್ಕಳಲ್ಲಿದ್ದರೆ, ಮಹಿಳೆಯರು ಹೊಸ ಸೀರೆಗಳನ್ನು ಖರೀದಿಸಿದ ಸಂಭ್ರಮದಲ್ಲಿದ್ದರು. ಜನರನ್ನು ಸೆಳೆಯಲು ಬಟ್ಟೆ ಅಂಗಡಿಯವರು ಹಬ್ಬದ ಪ್ರಯುಕ್ತ ರಿಯಾಯ್ತಿ ದರದಲ್ಲಿ ಬಟ್ಟೆಗಳನ್ನು ಮಾರಾಟ ಮಾಡುವ ಬ್ಯುಸಿಯಲ್ಲಿದ್ದರು.

ಎಚ್ಡಿಕೆ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾಗಿದೆ: ಎಂ.ಆರ್.ಕುಮಾರಸ್ವಾಮಿ

Apr 08 2024, 01:00 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ 3 ನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್-ಬಿಜೆಪಿ ಸಂಬಂಧ ಹೊಸದೇನಲ್ಲ. 2006ರಲ್ಲಿಯೇ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆ ಮಾಡಿ ಕೆಲಸ ಮಾಡಿವೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವತ್ತ ಎಲ್ಲ ಜತೆಗೂಡಿ ಕೆಲಸ ಮಾಡಲಿ.

ಚುನಾವಣೆ ಬದುಕು ಕಟ್ಟುವ ಪ್ರಕ್ರಿಯೆ : ಮಂಡ್ಯ ರಮೇಶ್

Apr 07 2024, 01:46 AM IST
ಒಂದು ಮತದಾನದಿಂದ ಯಾವ ಬದಲಾವಣೆಯಾಗುತ್ತದೆ ಎಂಬ ಆಲೋಚನೆಯನ್ನು ದೂರಮಾಡಿಕೊಳ್ಳಬೇಕು. ಬೇರೆ ಊರು, ದೇಶಗಳಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಜನರಿದ್ದಾರೆ. ಅವರು ನಮಗೆ ನಿದರ್ಶನವಾಗಬೇಕು. ಮತದಾನ ಪವಿತ್ರವಾದ, ಜವಾಬ್ದಾರಿಯುತ ಹಾಗೂ ಆತ್ಮತೃಪ್ತಿ ನೀಡುವ ಕೆಲಸ. ಎಲ್ಲರೂ ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತ ಮುತ್ತಲು ಇರುವ ಸಾರ್ವಜನಿಕರು ಹಾಗೂ ಯುವಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೆರೇಪಿಸಿ ಎಂದು ಮಂಡ್ಯ ರಮೇಶ್ ತಿಳಿಸಿದರು.

ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕ ಕಾರ್ಯಾಚರಣೆ ಸ್ಥಗಿತ

Apr 06 2024, 12:48 AM IST
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕದ ಕಾರ್ಯನಿರ್ವಹಣೆ ಬಂದ್ ಆಗಿರುವುದರಿಂದ ಹವಾಮಾನಕ್ಕೆ ಸಂಬಂಧಿಸಿದ ಯಾವೊಂದು ಮಾಹಿತಿಯೂ ಸ್ಥಳೀಯ ರೈತರು ಸೇರಿದಂತೆ ನಾಲ್ಕೂ ಜಿಲ್ಲೆಯ ರೈತರಿಗೆ ದೊರೆಯದಂತಾಗಿದೆ. ಕೇಂದ್ರಸರ್ಕಾರದ ಸೂಚನೆಯಂತೆ ಫೆ.೨೯ರಿಂದಲೇ ಕಾರ್ಯನಿರ್ವಹಣೆ ಬಂದ್ ಮಾಡಲಾಗಿದೆ. ಹಣಕಾಸಿನ ಕೊರತೆಯಿಂದ ಘಟಕಗಳನ್ನು ಮುನ್ನಡೆಸಲಾಗದೆ ಮುಚ್ಚಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಂಡ್ಯ ಸಂಸದೆ ಸುಮಲತಾ ಕೊನೆಗೂ ಬಿಜೆಪಿಗೆ

Apr 06 2024, 12:45 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌, ಕೊಪ್ಪಳದ ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌

Apr 05 2024, 01:04 AM IST
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.

ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಸುಮಲತಾ ಅಂಬರೀಶ್‌ಗೆ ಕೃತಜ್ಞತೆ

Apr 04 2024, 01:06 AM IST
ಗುರುವಾರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಮಂಡ್ಯಕ್ಕೆ ಆಗಮಿಸಿ ಅರ್ಕೇಶ್ವರ, ಶ್ರೀಕಾಳಿಕಾಂಭ, ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿ ಬಳಿಕ ಮಂಡ್ಯದ ಡಿಸಿ ಕಚೇರಿಯಲ್ಲಿ ಬೆಳಗ್ಗೆ 11.05ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ.

ಮಂಡ್ಯ ಜಿಲ್ಲೆಯ ಹಿರಿಯ ಚೇತನಗಳಿಗೆ ಮಾಜಿ ಸಿಎಂ ಎಚ್‌ಡಿಕೆ ನಮನ

Apr 04 2024, 01:02 AM IST
ಸುಮಲತಾ ಅಂಬರೀಶ್‌ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವುದಕ್ಕೆ ಮೊದಲಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರು ಬಿಜೆಪಿ ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಾ ಅಭ್ಯರ್ಥಿಗಳ ಪರವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved