ವಾಲಿಬಾಲ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲೆಯ ಮಕ್ಕಳು
Sep 05 2024, 12:34 AM ISTದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಾವೇರಿ ಶಾಲೆಯ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ 18ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಫೈನಲ್ನಲ್ಲಿ ಎದುರಾಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.