500ಕ್ಕೂ ಹೆಚ್ಚು ಗಾಳಿಪಟ ತಯಾರಿಸಿ ಹಾರಿಸಿದ ಮಕ್ಕಳು
Nov 14 2023, 01:15 AM ISTಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯಾದ್ಯಂತ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವ ಹಿನ್ನೆಲೆ ಮೆಣಸಗಿ ಹಾಗೂ ಹೊಳೆಮಣ್ಣೂರ ಗ್ರಾಪಂ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಗಾಳಿಪಟ ತಯಾರಿಕೆ ಹಾಗೂ ಹಾರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ನೆರೆಯ ಹೊಳೆಮಣ್ಣೂರು ಹಾಗೂ ಮೆಣಸಗಿ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಉತ್ಸಾಹ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಇಚ್ಛಾಶಕ್ತಿಯಿಂದಾಗಿ ಇಲ್ಲಿಯ 500ಕ್ಕೂ ಹೆಚ್ಚು ಮಕ್ಕಳು ಸ್ವತಃ ಗಾಳಿಪಟ ತಯಾರಿಸಿ ಹಾರಿಸಿ ಸಂಭ್ರಮಿಸಿದರು.