ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂಬ ತಪ್ಪು ಮಾಹಿತಿಯಿಂದ ಗಾಬರಿಗೊಂಡ ಮಕ್ಕಳು..!
Jan 19 2024, 01:49 AM ISTನಂಜನಗೂಡು ತಾಲೂಕು ಸಾಲುಂಡಿ ಗ್ರಾಮದಲ್ಲಿ ಘಟನೆ, ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲು. ಶಾಲೆಯಲ್ಲಿ ತಯಾರಿಸಲಾದ ಬಿಸಿಯೂಟವನ್ನು ಮಕ್ಕಳಿಗೆ ಬಡಿಸುವ ಮೊದಲು ನಾನು ಸೇವಿಸುತ್ತೇನೆ. ಇಂದು ಸಹ ನಾನು ಊಟ ಮಾಡಿದ್ದೇನೆ. ಮಕ್ಕಳು ಯಾವುದೋ ತರಕಾರಿಯ ತುಂಡೊಂದನ್ನು ಹಲ್ಲಿ ಎಂದು ಭಾವಿಸಿ ಗಾಬರಿ ಮಾಡಿಕೊಂಡಿದ್ದಾರೆ. ನನಗೆ ಅದನ್ನು ಮಕ್ಕಳು ತೋರಿಸಿದ್ದು, ಪರಿಶೀಲಿಸಲಾಗಿ ಅದು ಹಲ್ಲಿಯಲ್ಲ.