ಭಾರೀ ಮಳೆಗೆ ಮನೆ ಗೋಡೆ ಕುಸಿದು ಹಸು ಸಾವು
Nov 02 2024, 01:28 AM ISTಗುಡುಗು ಸಹಿತ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಹಸು ಮೃತಪಟ್ಟಿರುವ ಘಟನೆ ತಾಲೂಕಿನ ಮೆಣಜಿಬೋರನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೇಟ್ ನಿಂಗೇಗೌಡರ ಪುತ್ರ ರವಿಕುಮಾರ್ ಅವರ 1 ಹಸು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಂದು ಹಸು ಪ್ರಾಣಾಪಾಯದಿಂದ ಪಾರಾಗಿದೆ.