ದೇಶದಲ್ಲಿ ಹಿಂದುಳಿದ ಎಲ್ಲರಿಗೂ ಸೌಲಭ್ಯಗಳು ಸಿಗಬೇಕು. ಅದಕ್ಕಾಗಿ ಶೇ. 50ರಷ್ಟು ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು - ಖರ್ಗೆ
ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.
ಬಿಜೆಪಿಯವರು ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಗುರಾಣಿಯಂತೆ ಬಳಸಿ ಕಾಂಗ್ರೆಸ್ ಅನ್ನು ಹಣಿಯುವ ಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಈ ಕುತಂತ್ರಕ್ಕೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಜೋರಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸಿದ್ದು, ಹನಿಟ್ರ್ಯಾಪ್ ದೂರು ಬಂದರೆ ತನಿಖೆ ನಡೆಸಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಪುನರ್ರಚನೆ ಹಾಗೂ ಪರಿಷತ್ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.