ಪ್ರಧಾನಿ ನರೇಂದ್ರ ಮೋದಿಯವರು ಅಜ್ಮೇರ್ ದರ್ಗಾದಲ್ಲಿ ಚಾದರ ಅರ್ಪಿಸಿದರು. ಪ್ರಧಾನಿ ಪರವಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಸ್ತಾಂತರಿಸಿದರು. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪರವಾಗಿ ಚಾದರ ಅರ್ಪಿಸಿದ್ದಾರೆ.
ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
2023ರ ಕರ್ನಾಟಕ ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಜಾಗೊಳಿಸಿದೆ.
ಹರ್ಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚಾಟಿ ಬೀಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಂತರಿಕ ಕಚ್ಚಾಟ ಮತ್ತು ಪರಸ್ಪರರ ಮೇಲಿನ ಟೀಕೆಗಳು ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಿವೆ ಎಂದರು