ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ವ್ಯಾಪ್ತಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದಿಂದ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.
ಉತ್ತರ ಭಾರತದ ಕೆಲ ರಾಜ್ಯಗಳು ಮಳೆಯಿಂದ ನಲುಗಿರುವ ನಡುವೆಯೇ, ಶುಕ್ರವಾರ ದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ