ಮಳೆ ಆರ್ಭಟ: ಬಂಟ್ವಾಳ ತಾಲೂಕು ಜನಜೀವನ ಅಸ್ತವ್ಯಸ್ತ
Jul 09 2024, 12:49 AM ISTಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಎಡೆಬಿಡದೆ ಮಳೆ ಸುರಿದ ಹಿನ್ನೆಲೆಯಲ್ಲಿ ಹೆದ್ದಾರಿಯೇ ಚರಂಡಿಯಾಗಿ ಪರಿವರ್ತನೆಗೊಂಡಿದೆ. ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ಸರ್ವಿಸ್ ರಸ್ತೆಯ ಡಾಂಬರು ನೀರು ಪಾಲಾಗಿದೆ. ಸದ್ರಿ ರಸ್ತೆಯಲ್ಲಿ ಪಯಣಿಸುವುದು ಸಾಹಸದ ಕೆಲಸವಾಗಿ ಪರಿಣಮಿಸಿದೆ.