ಕೊಡಗು ಜಿಲ್ಲೆಯಲ್ಲಿ ವಾಡಿಕೆ ಮಳೆ: ಅಗತ್ಯ ಮುನ್ನೆಚ್ಚರಕ್ಕೆ ಡಿಸಿ ಸೂಚನೆ
Jul 05 2024, 12:49 AM ISTಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಪಾಲ್ಗೊಂಡರು. ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಿರ್ದೇಶನ ನೀಡಿದರು.