ಸತತ 2 ಗಂಟೆ ಸುರಿದ ಮಳೆ:  ಜನಜೀವನ ಅಸ್ತವ್ಯಸ್ತ
Aug 27 2025, 01:00 AM ISTದಾಬಸ್‍ಪೇಟೆ: ಸೋಂಪುರ ಹೋಬಳಿಯಾದ್ಯಂತ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಸುರಿದ ಧಾರಾಕಾರ ಮಳೆಯಿಂದಾಗಿ ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ವ್ಯಾಪಾರಸ್ಥರು, ವಾಹನ ಸವಾರರು, ಸಾರ್ವಜನಿಕರು ಹೈರಾಣರಾದರು.