ಫೆಂಗಲ್ ಚಂಡಮಾರುತದ ಅಬ್ಬರ, ನಿರಂತರವಾಗಿ ಸುರಿದ ಮಳೆ
Dec 03 2024, 12:30 AM ISTತಮಿಳುನಾಡಿನಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಅಬ್ಬರದಿಂದ ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಬೆಳೆದ ಫಸಲು ಕೈ ಸೇರುವ ಮುನ್ನವೇ ಜಮೀನಿನಲ್ಲಿ ನೀರು ತುಂಬಿ ಸಾಕಷ್ಟು ನಷ್ಟವಾಗಿದೆ. ಹಲಗೂರು ಸುತ್ತಮುತ್ತಲ ಪ್ರದೇಶಗಳಲ್ಲಿ ರಾಗಿ ಮತ್ತು ಭತ್ತದ ಫಸಲು ಕಟಾವಿಗೆ ಬಂದಿದ್ದು, ಹೊಲಗದ್ದೆಗಳಲ್ಲಿ ಬೆಳೆದ ಫಸಲನ್ನು ಕೊಯ್ಲು ಮಾಡಿ ಹಾಕಲಾಗಿತ್ತು. ಆದರೆ, ಫೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆಯಿಂದಾಗಿ ಭತ್ತ ಪೂರ್ತಿ ನೆನೆದು ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಅಪಾರ ನಷ್ಟಕ್ಕೊಳಗಾಗಿದ್ದಾರೆ.