ಮುಮ್ತಾಜ್ ಅಲಿ ಮೃತದೇಹ ಪತ್ತೆ, ಮಹಿಳೆ ಸೇರಿ 6 ಮಂದಿ ವಿರುದ್ಧ ಕೇಸ್
Oct 08 2024, 01:18 AM ISTಕೂಳೂರು ಸೇತುವೆ ಪಕ್ಕ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ ಮೃತದೇಹ ಮಂಗಳವಾರ ಬೆಳಗ್ಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಜಾಲ ಬೀಸಲಾಗಿದೆ.