ಕೂಲಿಕಾರ್ಮಿಕರ ಆಟೋ ಪಲ್ಟಿಯಾಗಿ ಮಹಿಳೆ ಸಾವು
Nov 11 2024, 12:51 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಂಟಂ ಆಟೋವೊಂದು ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಕಾರ್ಮಿಕ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಅಲ್ಲದೇ, ದುರ್ಘಟನೆಯಲ್ಲಿ 9 ಜನ ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ತಂಗಡಗಿಯ ಸಮೀಪದ ಅಮರಗೋಳ ಕ್ರಾಸ್ ಬಳಿ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.