ರೈತ ಮಹಿಳೆ ಪಹಣಿ ಲೋಪ ಸರಿಪಡಿಸಲು ಮೇ 28ರವರೆಗೆ ಗಡುವು
May 11 2024, 01:30 AM ISTಕೊಗ್ಗನೂರು ಗ್ರಾಮದ ರೈತ ಮಹಿಳೆ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿದ್ದ ಲೋಪದೋಷಗಳನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲದಿದ್ದರೆ ದಾವಣಗೆರೆ ತಹಸೀಲ್ದಾರ್ ಕಚೇರಿ ಎದುರು ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಬುಳ್ಳಾಪುರ ಹನುಮಂತಪ್ಪ ಎಚ್ಚರಿಸಿದ್ದಾರೆ.