ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳಭಾಗದಲ್ಲಿ ಮಳೆ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೆಡೆ ಅಣೆಕಟ್ಟೆಗಳು ತುಂಬಿವೆ. ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಏಕಾಂಗಿಯಾಗಿದ್ದಾಗ ಬಟ್ಟೆ ವ್ಯಾಪಾರಿಯೊಬ್ಬರ ಪತ್ನಿಯನ್ನು ಕೊಂದು ಕಿಡಿಗೇಡಿಗಳು ಹಣ ಹಾಗೂ ಚಿನ್ನ ದೋಚಿರುವ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.