ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವೂ ಮುಖ್ಯ
Oct 23 2024, 12:43 AM ISTಮನುಷ್ಯ ದೈನಂದಿನ ಜೀವನದಲ್ಲಿ ಶಾರೀರಿಕ ಸದೃಢತೆ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪಿ.ಮಮತಾ ಹೇಳಿದರು. ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ನಿತ್ಯ ದುಡಿಯುವ ಕೈಗಳಿಗೆ ಒಂದಿಲ್ಲೊಂದು ಮಾನಸಿಕ ಒತ್ತಡ, ಖಿನ್ನತೆ ಕಾಡುವುದು ಕಂಡುಬರುತ್ತಿದೆ. ಅಂತಹ ಸನ್ನಿವೇಶದಲ್ಲಿ ತಜ್ಞ ವೈದ್ಯರ ಸಲಹೆ ಪಡೆಯವ ಅಗತ್ಯವಿದೆ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದರು.