ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ಜಿ.ಎಚ್.ಶ್ರೀನಿವಾಸ್
Sep 23 2024, 01:32 AM ISTತರೀಕೆರೆ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯ ಕೊಡುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಶನಿವಾರ ಜಿಲ್ಲಾಡಳಿತ, ಜಿಪಂ, ತಾಲೂಕು ಅಡಳಿತ, ತಾಪಂ ತರೀಕೆರೆ-ಅಜ್ಜಂಪುರ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಪುರಸಭೆ, ತರೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಅತಿಥೇಯ ಶಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಬದ ಬೀದಿ ತರೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.