ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ವೃದ್ಧಿ
Sep 01 2024, 01:55 AM ISTಮಕ್ಕಳು ಮೊಬೈಲ್, ಟಿವಿ ಬಳಕೆ ಕಡಿಮೆ ಮಾಡಿ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ವಹಿಸಿದರೆ ದೈಹಿಕವಾಗಿ ಮಾನಸಿಕವಾಗಿ ಆತ್ಮಸ್ಥೈರ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎನ್ ದೀಪ ಅಭಿಪ್ರಾಯಪಟ್ಟರು. ನುಗ್ಗೇಹಳ್ಳಿ ಹೋಬಳಿ ಕೇಂದ್ರ ವಾಲಿಬಾಲ್ ಆಟಕ್ಕೆ ಹೆಚ್ಚು ಪ್ರಸಿದ್ಧಿಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇಲ್ಲಿನ ವಾಲಿಬಾಲ್ ಕ್ರೀಡಾಪಟುಗಳು ಹೆಚ್ಚು ಹೆಸರು ಮಾಡಿದ್ದಾರೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲೂ ಹೆಚ್ಚು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಹೋಬಳಿ ಕ್ರೀಡಾಪಟುಗಳು ತಾಲೂಕು ಹಾಗೂ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೋಬಳಿ ಕೇಂದ್ರಕ್ಕೆ ಉತ್ತಮ ಹೆಸರು ತರುವಂತೆ ಕಿವಿಮಾತು ಹೇಳಿದರು.