ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಾಣ ಮಾಡಬೇಕು: ಎಚ್.ಅಶ್ವಿನ್
Jun 20 2024, 01:08 AM ISTವಿದ್ಯಾರ್ಥಿಗಳ ಜೀವನ ಖಾಲಿ ಹಾಳೆ ಇದ್ದಂತೆ. ಅದರಲ್ಲಿ ಮೌಲ್ಯಾಧಾರಿತ ಮತ್ತು ಸುಂದರವಾದ ಬದುಕಿನ ಬರಹವನ್ನು ಬರೆಯಲು ಪ್ರಯತ್ನಿಸಿ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣ ಅತ್ಯಗತ್ಯ. ನಿರ್ದಿಷ್ಟವಾದ ಗುರಿಯಿದ್ದಾಗ ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಕ್ಕೆ ತಕ್ಕ ಪ್ರತಿಫಲ ನಿಶ್ಚಿತ. ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.