ಮಾನಸಿಕ, ದೈಹಿಕ ಸದೃಢರಾಗಲು ಕ್ರೀಡೆ ಸಹಕಾರಿ
Sep 07 2025, 01:00 AM ISTಕ್ರೀಡೆಗಳು ಮಾನಸಿಕ, ದೈಹಿಕವಾಗಿ ಸದೃಢರಾಗಲು ತುಂಬಾ ಮುಖ್ಯ. ಆ ನಿಟ್ಟಿನಲ್ಲಿ ಶಿಕ್ಷಕರು ಪ್ರಾಥಮಿಕ ಶಾಲಾ ಹಂತದಲ್ಲೇ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ 2025-26 ನೇ ಸಾಲಿನ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.