ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸರ್ಕಾರ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಒಟ್ಟು ಏಳು ಗ್ಯಾಲರಿಗಳಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿರುವ ‘ಮನೆಗೊಂದು ಕಲಾಕೃತಿ’ ಶೀರ್ಷಿಕೆಯಡಿ ಪ್ರದರ್ಶನಗೊಳ್ಳುತ್ತಿದೆ. ಆರುನೂರಕ್ಕೂ ಹೆಚ್ಚು ವೈವಿಧ್ಯಮಯ ಶೈಲಿಯ ಕಲಾವಿದರ ಹಲವಾರು ಕಲಾಕೃತಿಗಳು ಈ ಪ್ರದರ್ಶನದಲ್ಲಿರುವುದು ವಿಶೇಷ.
ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.31 ರಂದು ಭರ್ಜರಿ ಮದ್ಯ ಮಾರಾಟವಾಗಿದೆ. ಒಂದೇ ದಿನದಲ್ಲಿ 69 ಲಕ್ಷ ಲೀಟರ್ ಮದ್ಯ ಬಿಕರಿಯಾಗಿದೆ.