ನಿಷೇಧಿತ ಕೀಟನಾಶಕ ಮಾರಾಟ : ದಾಸ್ತಾನು ಜಪ್ತಿ
Nov 21 2024, 01:04 AM ISTತುಮಕೂರು ತಾಲೂಕಿನ ಹೆಬ್ಬೂರು ಗ್ರಾಮದ ಲಕ್ಷ್ಮೀವೆಂಕಟೇಶ್ವರ ಅಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರು. ಮೌಲ್ಯದ 10.2 ಲೀಟರ್ ಪ್ರಮಾಣದ ಡೈಮಿಥೋಯೇಟ್-30% ಇ.ಸಿ.(ರೋಗಾರ್) ಎಂಬ ನಿಷೇಧಿತ ಕೀಟನಾಶಕವನ್ನು ಕೃಷಿ ಇಲಾಖೆಯ ಜಾರಿದಳ ವಿಭಾಗವು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.