ಸಹಾಯಧನದಲ್ಲಿ ಪಡೆದ ಕೃಷಿ ಪರಿಕರ ರೈತರು ಮಾರಾಟ ಮಾಡಬಾರದು
Dec 17 2023, 01:45 AM ISTತುಂತುರು ನೀರಾವರಿ ಯೋಜನೆ ಅಡಿಯಲ್ಲಿ ನೀರಾವರಿ ಹೊಂದಿರುವ ರೈತರು ಸಹಾಯಧನದಲ್ಲಿ ಸ್ಪ್ರಿಂಕ್ಲರ್ ಪೈಪ್ಗಳನ್ನು ಪಡೆದುಕೊಂಡು ಹೆಚ್ಚಿನ ಹಣಕ್ಕೆ ಬೇರೊಬ್ಬರಿಗೆ ಮಾರಾಟ ಮಾಡುವುದು ಕಂಡು ಬಂದಿದೆ. ಈ ತರಹದ ಬೆಳವಣಿಗೆ ರೈತರಲ್ಲಿ ಬರಬಾರದು ಎಂದು ಶನಿವಾರ ಶಿರಹಟ್ಟಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆ, ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕ ಸ್ಪ್ರಿಂಕ್ಲರ್ ಪೈಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಸಿದರು.