ಶಾಲಾ ಕಾಲೇಜು ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ಪತ್ತೆಗೆ ಕ್ರಮವಹಿಸಿ
Feb 02 2025, 11:49 PM ISTಹಾಸನ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಸಾಗಾಣಿಕೆ, ಮಾರಾಟ ಹಾಗೂ ಬಳಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಔಷಧಿ ಅಂಗಡಿಗಳಲ್ಲಿ ಒಂದೇ ರೀತಿಯಾಗಿರುವ ಹೆಚ್ಚಿನ ಡ್ರಗ್ ಮಾರಾಟವಾಗುತ್ತಿದ್ದರೆ ಅಂತಹ ಅಂಗಡಿಗಳ ಮೇಲೆ ಸೂಕ್ತ ನಿಗಾವಹಿಸಿ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಹಾಯಕ ಔಷಧ ನಿಯಂತ್ರಣಾಧಿಕಾರಿಗೆ ಸೂಚಿಸಿದರು.