ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ, 3 ಮಳಿಗೆಗಳ ಪರವಾನಗಿ ಅಮಾನತು
Jul 12 2024, 01:31 AM ISTಶಿಗ್ಗಾಂವಿ ತಾಲೂಕಿನ ಬಂಕಾಪುರ, ಹುಲಗೂರಿನಲ್ಲಿ ರಸಗೊಬ್ಬರ ಮಾರಾಟದ ಮಳಿಗೆಗಳ ಮೇಲೆ ಬುಧವಾರ ದಾಳಿ ನಡೆಸಿದ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾಬುರಾವ್ ದೀಕ್ಷಿತ ಅವರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಮೂರು ಮಳಿಗೆಗಳ ಪರವಾನಗಿಯನ್ನು ಅಮಾನತುಗೊಳಿಸಿದ್ದಾರೆ.