ಶೀಘ್ರ ಒಳ ಮೀಸಲಾತಿ ಜಾರಿಗೆ ಆಗ್ರಹ
Aug 01 2025, 11:45 PM ISTಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ ಮೂಲಕ ಮೆರವಣಿಗೆ ನಡೆಸಿ ಬೃಹತ್ ಪ್ರತಿಭಟನೆ ಮುಖಾಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕರ್ನಾಟಕ ಸರ್ಕಾರವು ಈ ಸರ್ವೋಚ್ಛ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.