ಎಸ್ಸಿ ಎಸ್ಟಿ ಒಳ ಮೀಸಲಾತಿ ಉಪ ವರ್ಗೀಕರಣಕ್ಕೆ ಸುಪ್ರೀಂಕೋರ್ಟ್ ಅಸ್ತು
Aug 04 2024, 01:20 AM IST ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪುನ್ನು ನೀಡಿದ್ದು, ಈ ನಿಟ್ಟಿನಲ್ಲಿ ಒಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿರುವುದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಡಗೈ ಸಮುದಾಯ ಸುಮಾರು 30 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಾಲೂಕು ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಎ. ಪಿ. ಚಂದ್ರಯ್ಯ ಹೇಳಿದರು.