ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಒಳ ಮೀಸಲಾತಿಯಲ್ಲಿ ಶೇ.1ರಷ್ಟು ಮೀಸಲಿಗೆ ಪಟ್ಟು ಹಿಡಿದಿರುವ ಅಲೆಮಾರಿ ಸಮುದಾಯ, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಮ್ಮೆ ಆಗ್ರಹಿಸಿದ್ದಾರೆ. ಅದಕ್ಕೆ ಸಿಎಂ, ಶೇ. 1 ಒಳಮೀಸಲಾತಿ ಮರುಸ್ಥಾಪಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸುವ ಸಂಬಂಧ ನೂತನ ಕಾಯ್ದೆ ಜಾರಿಗೆ ಸರ್ಕಾರದ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ.