ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಿ ಅಸಮಾನತೆ ಹಾಗೂ ಪ್ರಾದೇಶಿಕ ಅಸಮತೋಲನ ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಹೋರಾಟ ಸಮಿತಿಯ ಕಾರ್ಯಕರ್ತರು ಡಿ.30ರಂದು ನಿಗದಿಪಡಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ರದ್ದು ಪಡಿಸಿರುವುದಾಗಿ ಎಂದು ರೈತ ಮುಖಂಡ ಕಾರಹಳ್ಳಿ ಶ್ರೀನಿವಾಸ್ ತಿಳಿಸಿದರು.
ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ಸಾರ್ವಜನಿಕ -ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ2,663 ,74 ಕೋಟಿ ರು. ವೆಚ್ಚದಲ್ಲಿ ವಿಶ್ವ ದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.
-ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ! । ಖರ್ಗೆ ಮುಂದೆ ಸಿಎಂ ಮನವಿ ಮಾಡಿದ್ದೇಕೆ?