ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ತೇಜೋವಧೆ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ದೇವರಹಿಪ್ಪರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಸಮಾಜದ ಹೋರಾಟ ವಿಕೋಪಕ್ಕೆ ತಿರುಗಿದಾಗ ನಡೆದ ಲಾಠಿ ಚಾರ್ಜ್ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ ಹಂಚಿಕೆ ಮಾಡಿದ್ದ ಮೀಸಲಾತಿ ವಾಪಸ್ ಪಡೆಯುವುದಾಗಿ ನಾವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಹೇಳಿಕೆ ತಿರುಚುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಮಂಡ್ಯ ಸೇರಿ ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಆಗಮಿಸಿದ್ದ ಸಾವಿರಾರು ಜನ ಕಂಬನಿ ಮಿಡಿದರು. ಅಭಿಮಾನ, ಗೌರವದಿಂದ ಎಸ್.ಎಂ.ಕೃಷ್ಣ ಅವರಿಗೆ ಜಯವಾಗಲಿ, ಮತ್ತೆ ಹುಟ್ಟಿ ಬನ್ನಿ ಎಂದು ಘೋಷಣೆಗಳನ್ನು ಕೂಗಿದರು.