ಬಿಜೆಪಿ ಈ ಹಿಂದಿನ ಭರವಸೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸವಾಲು
Apr 15 2024, 01:17 AM ISTಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಮಡಿಕೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.