ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದ್ದ ವಿವಾದಿತ 50:50 ಅನುಪಾತದ ನಿವೇಶನಗಳ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಮುಡಾದಿಂದ 50:50ರ ಅನುಪಾತದಲ್ಲಿ ಹಂಚಿಕೆ ಮಾಡಲಾಗಿರುವ ನಿವೇಶನಗಳನ್ನು ರದ್ದು ಮಾಡುವಂತೆ ಕೋರಿ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಬರೆದಿದ್ದ ಪತ್ರಕ್ಕೆ ಸಂಬಂಧಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖಾ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಮುಡಾ ಹಗರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ 10ಕ್ಕೂ ಹೆಚ್ಚಿನ ಕಡೆ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.
ಮುಡಾ ಪ್ರಕರಣದ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.