ಮುಡಾ 50:50 ನಿಯಮದಲ್ಲಿ ಪಡೆದ ಸೈಟ್ ಗಳು ಪರಬಾರೆ ಆಗ್ತಿವೆ. 2020 ರಿಂದ 2024ರ ವರೆಗಿನ ಎಲ್ಲಾ 50:50 ಸೈಟ್ ರದ್ದತಿಗೆ ಮನವಿ ಮಾಡಿದ್ದೇನೆ. ಟೆಕ್ನಿಕಲ್ ಕಮಿಟಿ ವರದಿ ಜಾರಿ ಮಾಡಿ, ಇಬ್ಬರು ಹಿಂದಿನ ಕಮಿಷನರ್ ವಜಾಗೆ ಆಗ್ರಹಿಸಿದ್ದೇನೆ. ಅವರು ಕೂಡ ತನಿಖೆ ನಡೆಯುತ್ತಿದೆ, ಮಾರಾಟಕ್ಕೆ ಅವಕಾಶ ಕೊಡಲ್ಲ.
ಮುಡಾ ಹಗರಣದಿಂದ ಜನತೆಯ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿ ವಿಷಯವನ್ನು ಮುನ್ನೆಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ಎಂದು ಸಾರುವ ಕರಪತ್ರಗಳನ್ನು ತಾಲೂಕಿನಾದ್ಯಂತ ಹಂಚಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.)ದ ತನಿಖೆ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಹಲವಾರು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಬಲವಾಗಿ ನಿಲ್ಲಲು ತೀರ್ಮಾನಿಸಿದ್ದಾರೆ.