ಮುಸ್ಲಿಂ ಓಲೈಕೆಗಾಗಿ ಮೀಸಲಾತಿ ಘೋಷಣೆ
Mar 28 2025, 12:36 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತಗಳನ್ನು ಉಳಿಸಿಕೊಳ್ಳಲು ಓಲೈಕೆಗಾಗಿ ಶೇ.4 ರಷ್ಟು ಮೀಸಲಾತಿ ನೀಡುವುದರೊಂದಿಗೆ ವಿವಿಧ ಸೌಲಭ್ಯಗಳನ್ನು ನೀಡಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಮಾತ್ರವಲ್ಲದೇ ಗುಲಾಮರನ್ನಾಗಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಇಂತಹ ಸರ್ಕಾರವನ್ನು ಕಿತ್ತೆಸೆದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು, ಮುಖಂಡರು ಮುಂದಾಗಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.