ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗದ 16 ನಿಲ್ದಾಣಗಳ ಪೈಕಿ 13ರಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ಡಿ.9ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಕೋರಿಕೆ ಮೇರೆಗೆ ಮೆಟ್ರೋ ರೈಲುಗಳನ್ನು ಬೆಳಗ್ಗೆ 7ಗಂಟೆ ಬದಲಾಗಿ 5.30ಕ್ಕೆ ಆರಂಭಿಸಲಾಗುತ್ತಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ನಮ್ಮ ಮೆಟ್ರೋದ ಮುಂಬರುವ ನೀಲಿ ಮಾರ್ಗವನ್ನು ಎರಡು ಹಂತದಲ್ಲಿ ವಾಣಿಜ್ಯ ಸೇವೆಗೆ ಮುಕ್ತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಯೋಜಿಸಿದೆ.
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್ ಡೆಕ್ಕರ್ ಯೋಜನೆಗಾಗಿ ಈಗಾಗಲೇ ಜಿಯೋಟೆಕ್ನಿಕಲ್ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಿಕೊಳ್ಳಲು ಮುಂದಾಗಿದೆ.