ಲೀಡ್ ಜೊತೆ.. ಎಸ್.ಎಂ. ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿದಂತೆ ನಾಲ್ವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ
Mar 04 2024, 01:16 AM ISTಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್ ಇದ್ದರು.