ಉದ್ಯಮಿ ಗೌತಮ್ ಅದಾನಿ ವಿರುದ್ಧದ ಹಗರಣ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಭಟನೆ ತೀವ್ರಗೊಳಿಸಿರುವ ಇಂಡಿಯಾ ಕೂಟದ ಸಂಸದರು, ಗುರುವಾರ ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.
ಭಾರತದ ಮೂಲಸೌಕರ್ಯ ಯೋಜನೆಗಳ ತಡೆರಹಿತ ಅನುಷ್ಠಾನಕ್ಕಾಗಿ 9 ವರ್ಷ ಹಿಂದೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದ ‘ಪ್ರಗತಿ’ ಆನ್ಲೈನ್ ವೇದಿಕೆ ದೇಶದ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು.
ಕಳೆದ 10 ವರ್ಷಗಳಲ್ಲಿ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ವಿಶ್ವದಲ್ಲೇ 4ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಬೆಳೆದಿದೆ. ನಮ್ಮ ದೇಶದ ಆರ್ಥಿಕತೆಯು ಪ್ರಪಂಚದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ದೆಹಲಿ ತಲುಪಿದ್ದು ಶುಕ್ರವಾರ ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.