ಉಕ್ರೇನ್ ಬಿಕ್ಕಟ್ಟು ಇತ್ಯರ್ಥಕ್ಕೆ ಎಲ್ಲಾ ನೆರವು: ಮೋದಿ
Oct 23 2024, 12:47 AM IST‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂಬ ತಮ್ಮ ನಿಲುವನ್ನು ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು ಇತ್ಯರ್ಥಕ್ಕೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ’ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ರಷ್ಯಾ ನೆಲದಲ್ಲೇ ಶಾಂತಿ ಮಂತ್ರ ಜಪಿಸಿದ್ದಾರೆ.