ಮನ್ ಕಿ ಬಾತ್ ನಲ್ಲಿ ಮೋದಿ ಶ್ಲಾಘಿಸಿದ್ದ ಹೆಸರಾಂತ ಸಾಹಿತಿ, ಹೋಟೆಲ್ ಉದ್ಯಮಿ ಕಾವೆಂಶ್ರೀ ನಿಧನ
Mar 11 2025, 02:02 AM ISTಹೆಸರಾಂತ ಸಾಹಿತಿ, ಹೋಟೆಲ್ ಉದ್ಯಮಿ, ಕಲಾಚೇತನ ಸಂಸ್ಥೆಯ ಮೂಲಕ ಕಳೆದ 25 ವರ್ಷಗಳಿಂದ ನಾಡಿನ ಸಂಗೀತ, ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದ ಕಾವೆಂಶ್ರೀ (54) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.