ಮಹಾತ್ಮ ಗಾಂಧೀಜಿಯವರ ಕುರಿತು ಚಲನಚಿತ್ರ ಬರುವವರೆಗೂ ಅವರು ಯಾರೆಂದು ಪ್ರಪಂಚಕ್ಕೆ ಗೊತ್ತಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು