ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಫಿಕ್ಸ್ ಮಾಡಲೆಂದೇ ವಿದೇಶಾಂಗ ಸಚಿವ ಜೈಶಂಕರ್ ಕಳೆದ ಡಿಸೆಂಬರ್ನಲ್ಲಿ ಅಮೆರಿಕಕ್ಕೆ ತೆರಳಿದ್ದರು ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
10-12 ವರ್ಷಗಳ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 12 ಲಕ್ಷದ ವರೆಗಿನ ಆದಾಯದಲ್ಲಿ 2.60 ಲಕ್ಷ ತೆರಿಗೆ ಪಾವತಿಸಬೇಕಿತ್ತು. ಆದರೆ ಬಿಜೆಪಿ ಸರ್ಕಾರದ ಈ ಬಾರಿಯ ಬಜೆಟ್ ಬಳಿಕ 12 ಲಕ್ಷದವರೆಗಿನ ಆದಾಯಕ್ಕೆ ಒಂದೇ ಒಂದು ರುಪಾಯಿ ತೆರಿಗೆ ಕಟ್ಟಬೇಕಿಲ್ಲ! ಪ್ರಧಾನಿ ಮೋದಿ
ಇದು ''ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ''ದ ಬಜೆಟ್. ಜನರು ಬಯಸಿದ ಬಜೆಟ್! ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಬಣ್ಣಿಸಿದ್ದು ಹೀಗೆ.
ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಜನರ ಕೈಗೆ ಹೆಚ್ಚು ಹಣ ನೀಡುವ ‘ಜನರ ಬಜೆಟ್’ ಎಂದು ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದ ಮೂರನೇ ಅವಧಿಯು ಈ ಹಿಂದಿನ ಆಡಳಿತಕ್ಕಿಂತ ವೇಗವಾಗಿ ಕೆಲಸ ಮಾಡುತ್ತಿದ್ದು, ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ.
ಕೇಂದ್ರ ಸರ್ಕಾರ ಇ -ಶ್ರಮ್ ಯೋಜನೆಯ ಮೂಲಕ ದೇಶದ ಎಲ್ಲಾ ಕೃಷಿ ಕಾರ್ಮಿಕರು, ರೈತರು, ಅಸಂಘಟಿತ ಕಾರ್ಮಿಕರನ್ನು ಇಎಸ್ಐ, ಪಿಎಫ್ ಸೌಲಭ್ಯದ ವ್ಯಾಪ್ತಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.