ಉಚ್ಚಾಟಿತ ಟಿಎಂಸಿ ನಾಯಕ ಶೇಖ್ ಶಾಜಹಾನ್ ಬೆಂಬಲಿಗರರಿಂದ ಅತ್ಯಾಚಾರಕ್ಕೆ ಒಳಗಾದ ಪ.ಬಂಗಾಳದ ಸಂದೇಶ್ಖಾಲಿ ಗ್ರಾಮದ ಮಹಿಳೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಭೇಟಿ ಮಾಡಿ, ಅವರನ್ನು ಸಂತೈಸಿದರು. ದೇಶವನ್ನೇ ಬೆಚ್ಚಿ ಬೀಳಿಸಿದ ಸಂದೇಶ್ಖಾಲಿ ಸಂತ್ರಸ್ತೆಯರನ್ನು ಪ್ರಧಾನಿ ಭೇಟಿ ಮಾಡಿದ್ದು ಇದೇ ಮೊದಲು.