ಇರಾನ್ ವಿಚಾರದಲ್ಲಿ ಮೋದಿ ಮೌನ ಏಕೆ?: ಸೋನಿಯಾ ಕಿಡಿ
Jun 22 2025, 01:18 AM IST ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಗಾಜಾ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿ ವಿಚಾರದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿ ಕಾರಿದ್ದು, ‘ಇದು ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿ’ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.