ಅಸ್ಸಾಂನಲ್ಲಿ ಭಾರತ್ ಜೊಡೊ ನ್ಯಾಯ ಯಾತ್ರೆ ನಡೆಯುತ್ತಿದ್ದ ವೇಳೆ ಕೆಲವರು ಮೋದಿ ಹಾಗೂ ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಬಸ್ನಿಂದ ಕೆಳಗಿಳಿದು ರಾಹುಲ್ ಗಾಂಧಿ ಘೋಷಣೆ ಕೂಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನಿತ್ಯ ದೇಗುಲ ದರ್ಶನ ವ್ರತದ ಅಂಗವಾಗಿ ನರೇಂದ್ರ ಮೋದಿ ವಿವಿಧ ದೇಗುಲಗಳಲ್ಲಿ ಪೂಜೆ ಮಾಡುತ್ತಿದ್ದು, ಶ್ರೀರಂಗಂನಲ್ಲಿ ಕಂಬರಾಮಾಯಣ ಆಲಿಸಿದ ಮೋದಿ, ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ ರುದ್ರಾಕ್ಷಿ ಮಾಲೆ ಧರಿಸಿ ರಾಮೇಶ್ವರದ ರಾಮನಾಥನ ದರ್ಶನ ಕೂಡ ಪಡೆದರು.
ದೇಶ-ವಿದೇಶಗಳ ಜನರ ಕನಸು, ಆಕಾಂಕ್ಷೆಗಳನ್ನು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರ ಮತ್ತು ಮೈಲುಗಲ್ಲುಗಳ ಮೂಲಕ ಬೆಂಗಳೂರು ನಗರ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರವನ್ನು ಕೊಂಡಾಡಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.